ಭಾರಿ ಮಳೆ : ದ.ಕ. ಜಿಲ್ಲೆಯಲ್ಲಿ ಮೂರು ದಿನ ರೆಡ್ ಅಲರ್ಟ್

Update: 2020-09-19 14:00 GMT

ಮಂಗಳೂರು, ಸೆ.19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಿದೆ.

ಸೆ.20 ರಿಂದ 22ರಂದು 115.6ರಿಂದ 204 ಮಿ.ಮೀ. ಮಳೆ ಬೀಳುವ ಸಾಧ್ಯತೆ ಇದೆ. ಈ ದಿನಗಳಲ್ಲಿ ಕಡಲಿನ ಅಬ್ಬರ ಹೆಚ್ಚಾಗಿ ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿಯಲ್ಲಿ 45-55 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಗಾಳಿಯಿಂದ ಕೂಡಿದ ಬಿರುಗಾಳಿಯ ವಾತಾವರಣ ಇರಲಿದೆ. ಇದರಿಂದ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸೆ. 23ರಿಂದ ‘ಆರೆಂಜ್ ಅಲರ್ಟ್’ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News