ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೋನ ಚಿಕಿತ್ಸೆ: ಕೋಟ

Update: 2020-09-19 13:47 GMT

ಉಡುಪಿ, ಸೆ.19: ಕೊರೋನ ಸೋಂಕಿತರಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತರುವಂತೆ ಆದೇಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲ ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಅವಕಾಶ ನೀಡಬೇಕು. ದ.ಕ. ಜಿಲ್ಲೆಯಲ್ಲಿ 64 ಆಸ್ಪತ್ರೆಗಳನ್ನು ಈ ಯೋಜನೆಯಡಿ ನೊಂದಣಿ ಮಾಡುವಂತೆ ಆದೇಶಿಸಲಾಗಿದೆ ಎಂದು ಹೇಳಿದರು.

ಸರಕಾರಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಬೆಡ್ ಸಮಸ್ಯೆ ಇದ್ದು, ಅದನ್ನು ಸರಿಪಡಿಸುವ ಪ್ರಯತ್ನ ನಡೆಯುತ್ತಿದೆ. ಉಡುಪಿ, ಮಂಗಳೂರು ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಅಗತ್ಯವಿರುವ ವೈದ್ಯರ ನೇಮಕಾತಿ ಮಾಡಲಾಗಿದೆ ಎಂದ ಅವರು, ದೇವಸ್ಥಾನದಲ್ಲಿ ಪೂರ್ಣ ಪ್ರಮಾಣದ ಅನ್ನದಾನ ಹಾಗೂ ಮೆರವಣಿಗೆ ನಡೆಸಲು ಅವಕಾಶವಿಲ್ಲ. ಅದನ್ನು ಬಿಟ್ಟರೇ ಉಳಿದ ಎಲ್ಲ ಸೇವೆಗಳಿಗೆ ಯಾವುದೇ ತೊಂದರೆ ಇಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News