ಮಂಗಳೂರಿನಿಂದ ಮುಂಬೈಗೆ ಮಲ್ಟಿಆಕ್ಸ್‌ಲ್ ವೋಲ್ವೋ, ನಾನ್ ಎಸಿ ಸ್ಲೀಪರ್ ಬಸ್ ಸೌಲಭ್ಯ

Update: 2020-09-19 13:54 GMT

ಮಂಗಳೂರು, ಸೆ.19: ಮಂಗಳೂರು ವಿಭಾಗದ ಬಸ್ ನಿಲ್ದಾಣದಿಂದ ಪೂನಾ ಹಾಗೂ ಮುಂಬೈಗೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಮಲ್ಟಿ ಆಕ್ಸ್‌ಲ್ ವೋಲ್ವೋ ಹಾಗೂ ನಾನ್ ಎಸಿ ಸ್ಲೀಪರ್ ವಾಹನಗಳೊಂದಿಗೆ ಸಾರಿಗೆ ಸೌಲಭ್ಯವನ್ನು ಸೆ.24ರಿಂದ ಆರಂಭಿಸಲಾಗುತ್ತದೆ.

ನಾನ್ ಎಸಿ ಸ್ಲೀಪರ್ ಬಸ್ ಮಂಗಳೂರಿನಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲಾ, ಬೆಳಗಾವಿ, ಪೂನಾ, ಮುಂಬೈಗೆ ಬೆಳಗ್ಗೆ 7:30 ಗಂಟೆಗೆ ತಲುಪಲಿದೆ. ಪ್ರಯಾಣ ದರ 1,600 ರೂ.

ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಬೆಳಗಾವಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಪಡುಬಿದ್ರಿ, ಮುಲ್ಕಿ, ಸುರತ್ಕಲ್, ಮಂಗಳೂರಿಗೆ ಬೆಳಿಗ್ಗೆ 7:30 ಗಂಟೆಗೆ ತಲುಪಲಿದೆ. ಪ್ರಯಾಣ ದರ 1,600 ರೂ.

ಮಲ್ಟಿ ಆಕ್ಸ್‌ಲ್ ವೋಲ್ಟೋ ಬಸ್ ಮಂಗಳೂರಿನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್, ಶಿರ್ವ ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲಾ, ಬೆಳಗಾವಿ, ಪೂನಾ, ಮುಂಬೈಗೆ ಬೆಳಗ್ಗೆ 7 ಗಂಟೆಗೆ ತಲುಪಲಿದೆ. ಪ್ರಯಾಣ ದರ 1,800 ರೂ.

ಮುಂಬೈಯಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಪೂನಾ, ಬೆಳಗಾವಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವಾ ಮಂಚಕಲ್, ಬೆಳ್ಮಣ್, ನಿಟ್ಟೆ, ಕಾರ್ಕಳ, ಮೂಡಬಿದಿರೆ, ಮಂಗಳೂರಿಗೆ ಬೆಳಗ್ಗೆ 7 ಗಂಟೆಗೆ ತಲುಪಲಿದೆ. ಪ್ರಯಾಣ ದರ 1,800 ರೂ.

ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. www.ksrtc.in ವೆಬ್‌ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಟಂರ್‌ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News