ಸಶಸ್ತ್ರ ಪಡೆಗಳ 41 ಸಿಬ್ಬಂದಿ ಕೊರೋನಗೆ ಬಲಿ: ಕೇಂದ್ರ ಸರಕಾರ

Update: 2020-09-19 14:17 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ,ಸೆ.19: ಸಶಸ್ತ್ರ ಪಡೆಗಳ 41 ಸಿಬ್ಬಂದಿ ಕೊರೋನ ವೈರಸ್‌ಗೆ ಬಲಿಯಾಗಿದ್ದಾರೆ ಮತ್ತು 22,353 ಸಿಬ್ಬಂದಿಗಳು ಸೋಂಕು ಪೀಡಿತರಾಗಿದ್ದಾರೆ ಎಂದು ಸಹಾಯಕ ರಕ್ಷಣಾ ಸಚಿವ ಶ್ರೀಪಾದ ನಾಯ್ಕ್ ಅವರು ಶನಿವಾರ ರಾಜ್ಯಸಭೆಯಲ್ಲಿ ತಿಳಿಸಿದರು.

  ಸಶಸ್ತ್ರ ಪಡೆಗಳಲ್ಲಿ ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ತಡೆಯಲು ಸರಣಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ ಅವರು,ಕೋವಿಡ್-19ಕ್ಕೆ ಸಂಬಂಧಿಸಿದ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಶಿಷ್ಟಾಚಾರಗಳಿಗೆ ಅನುಗುಣವಾಗಿ ಸಶಸ್ತ್ರ ಪಡೆಗಳ ಆಸ್ಪತ್ರೆಗಳಲ್ಲಿ ವೈರಸ್ ನಿರೋಧಕ ಔಷಧಿಗಳ ವ್ಯಾಪಕ ದಾಸ್ತಾನಿದೆ. ಈ ಪೈಕಿ ಎರಡು ಆಸ್ಪತ್ರೆಗಳು ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಪ್ಲಾಸ್ಮಾ ಥೆರಪಿಯನ್ನು ಬಳಸುತ್ತಿವೆ ಎಂದರು.

ಪ್ರತ್ಯೇಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು 10 ಯುದ್ಧವಿಮಾನಗಳ ಪೈಲಟ್‌ಗಳು ಮತ್ತು 18 ನೇವಿಗೇಟರ್‌ಗಳು ಸೇರಿದಂತೆ ಭಾರತೀಯ ವಾಯುಪಡೆಯಲ್ಲಿ 1,875 ಮಹಿಳಾ ಅಧಿಕಾರಿಗಳಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News