ಸೆ.25ರ ಅಖಿಲ ಭಾರತ ಗ್ರಾಮೀಣ ಬಂದ್‍ಗೆ ಎಸ್‍ಯುಸಿಐ ಬೆಂಬಲ

Update: 2020-09-19 14:58 GMT

ಬೆಂಗಳೂರು, ಸೆ.19: ಕೇಂದ್ರ ಸರಕಾರ ಸುಗ್ರೀವಾಜ್ಞೆಯ ಮೂಲಕ ಅಂಗೀಕರಿಸಿರುವ ರೈತ ವಿರೋಧಿ ಕೃಷಿ ಮಸೂದೆಗಳನ್ನು ಎಸ್‍ಯುಸಿಐ ಖಂಡಿಸುತ್ತಿದ್ದು, ಇದನ್ನು ವಿರೋಧಿಸಿ ಸೆ.25ರಂದು ದೇಶಾದ್ಯಂತ ಹಮ್ಮಿಕೊಂಡಿರುವ ಅಖಿಲ ಭಾರತ ಗ್ರಾಮೀಣ ಬಂದ್‍ಗೆ ಬೆಂಬಲ ನೀಡುತ್ತಿದ್ದೇವೆಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಉಮಾ ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆ, ಕೃಷಿ ಉತ್ಪನ್ನ ಮಾರಾಟ ಮತ್ತು ವ್ಯವಹಾರ ಮಸೂದೆ ಸೇರಿದಂತೆ ರೈತ ವಿರೋಧಿ ಕೃಷಿ ಮಸೂದೆಗಳ ಅಂಗೀಕಾರದ ಹಿಂದೆ ಇಡೀ ಕೃಷಿ ವಲಯವನ್ನು ಕಾರ್ಪೊರೇಟ್ ಕಂಪೆನಿಗಳ ವಶಕ್ಕೆ ಒಪ್ಪಿಸುವ ಹುನ್ನಾರವಾಗಿದೆ. ಇದು ಜನಸಾಮಾನ್ಯರ ಹಿತಾಸಕ್ತಿಗೆ ಧಕ್ಕೆ ತರುವಂತಹದ್ದಾಗಿದೆ.

ಕೇಂದ್ರ ಸರಕಾರ ಜಾರಿ ಮಾಡಿರುವ ಈ ಕಾಯ್ದೆಗಳನ್ನು ವಿರೋಧಿಸಿ ಅಖಿಲ ಭಾರತ ರೈತರ ಸಂಘಗಳ ಸಹಕಾರ ಸಮಿತಿಯು ಸೆ.25ರಂದು ಅಖಿಲ ಭಾರತ ಗ್ರಾಮೀಣ ಬಂದ್‍ಗೆ ಕರೆ ನೀಡಿದೆ. ಈ ಬಂದ್‍ಗೆ ಸಂಪೂರ್ಣವಾಗಿ ಬೆಂಬಲಿಸಿ, ಈ ಕರಾಳ ಮಸೂದೆಗಳನ್ನು ಹಿಂಪಡೆಯುವಂತೆ ಸರಕಾರವನ್ನು ಒತ್ತಾಯಿಸುತ್ತೆವೆಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News