ದ.ಕ. ಜಿಲ್ಲೆಯ ಆರೋಗ್ಯ ಕ್ಷೇತ್ರದ ಸಮಸ್ಯೆ: ಸೆ. 22ರಂದು ಸಮಾನ ಮನಸ್ಕರ ದುಂಡು ಮೇಜಿನ ಸಭೆ

Update: 2020-09-19 16:22 GMT

ಮಂಗಳೂರು, ಸೆ.19: ದ.ಕ.ಜಿಲ್ಲೆಯ ಆರೋಗ್ಯ ಕ್ಷೇತ್ರದ ಸಮಸ್ಯೆಯ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯು ಸೆ.22ರಂದು ನಗರದ ಕೋಡಿಯಾಲ್‌ಬೈಲ್‌ನ ಸಿಬಿಇಯು ಗೋಲ್ಡನ್ ಜ್ಯುಬಿಲಿ ಹಾಲ್‌ನಲ್ಲಿ ಸಮಾನ ಮನಸ್ಕರ ದುಂಡು ಮೇಜಿನ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಆರೋಗ್ಯ ಕ್ಷೇತ್ರವನ್ನು ಸರಕಾರ ಕಡೆಗಣಿಸುತ್ತಿರುವುದರಿಂದ ಜನಸಾಮಾನ್ಯರು ಗುಣಮಟ್ಟದ ಚಿಕಿತ್ಸೆಗಾಗಿ ಪರದಾಡುವಂತಾ ಗಿದೆ. ಕೊರೋನ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದ ಹುಳುಕುಗಳು ಬಹಿರಂಗಗೊಳ್ಳುತ್ತಿವೆ. ಸೌಲಭ್ಯಗಳಿಲ್ಲದ ಸರಕಾರಿ ಆಸ್ಪತ್ರೆಗಳು ಜನರ ಅನಾರೋಗ್ಯಕ್ಕೆ ಪರಿಹಾರ ಒದಗಿಸಲು ವಿಫಲವಾಗಿದ್ದರೆ ಖಾಸಗಿ ಆಸ್ಪತ್ರೆಗಳ ನಿಯಮ ಬಾಹಿರ ದುಬಾರಿ ದರಗಳು ಜನಸಾಮಾನ್ಯರ ಬದುಕುವ ಹಕ್ಕನ್ನೆ ನಿರಾಕರಿಸುತ್ತಿದೆ. ಆರೋಗ್ಯ ಕ್ಷೇತ್ರದ ಇಂತಹ ವ್ಯಾಪಾರೀಕರಣ ನೀತಿಯ ವಿರುದ್ಧ ಡಿವೈಎಫ್‌ಐ ದ.ಕ.ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ‘ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ’ ಎಂಬ ಘೋಷಣೆಯಡಿ ಹೋರಾಟ ನಡೆಸುತ್ತಾ ಬಂದಿದೆ. ಹಾಗಾಗಿ ಆರೋಗ್ಯ ಕ್ಷೇತ್ರದ ಈ ಸಮಸ್ಯೆಗಳ ಬಗ್ಗೆ ಜನಾಭಿಪ್ರಾಯವನ್ನು ಮತ್ತಷ್ಟು ಕ್ರೋಢೀಕರಿಸುವ, ಹೋರಾಟವನ್ನು ಮತ್ತಷ್ಟು ವಿಶಾಲವಾಗಿ ಮುಂದುವರಿಸುವ ಹಿನ್ನಲೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News