ಚಿದಾನಂದ ಸಾಲಿ, ಶ್ರೀದೇವಿ ಕೆರೆಮನೆ ವಿಜಯ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ

Update: 2020-09-19 16:27 GMT

ಬೆಂಗಳೂರು, ಸೆ.19: ಕನ್ನಡ ಸಾಹಿತ್ಯ ಪರಿಷತ್ತಿನಿಂದ 2020 ನೇ ಸಾಲಿನ ಪ್ರತಿಷ್ಠಿತ ಶ್ರೀ ವಿಜಯ ಸಾಹಿತ್ಯ ಪ್ರಶಸ್ತಿಯನ್ನು ಚಿದಾನಂದ ಸಾಲಿ ಹಾಗೂ ಶ್ರೀದೇವಿ ಕೆರೆಮನೆ ಅವರನ್ನು ಆಯ್ಕೆ ಮಾಡಲಾಗಿದೆ.

ಶನಿವಾರ ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ಇಬ್ಬರ ಹೆಸರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ಧವಾದ ಹಾಗೂ ಮೌಲಿಕವಾದ ಕೊಡುಗೆ ನೀಡಿದ 45 ವಯಸ್ಸಿನ ಮಿತಿಯೊಳಗಿರುವ ಸಾಹಿತಿಗಳಿಗೆ ಶ್ರೀವಿಜಯ ಸಾಹಿತ್ಯ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯು 60 ಸಾವಿರ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News