ಮಹಿಳೆಯರಿಂದ ಸ್ವ ಉದ್ಯೋಗ: ಅರ್ಜಿ ಆಹ್ವಾನ

Update: 2020-09-19 16:41 GMT

ಮಂಗಳೂರು, ಸೆ.19: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ 20-21ನೇ ಸಾಲಿಗೆ ಮಹಿಳೆಯರು ಕೈಗೊಳ್ಳುವ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕಾ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ನೀಡುವ ಯೋಜನೆಯಡಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ 18ರಿಂದ 55 ವರ್ಷದೊಳಗಿನ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷ ರೂ. ಮೀರಿರಬಾರದು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಿಂದ ಅರ್ಜಿ ಪಡೆದು ಅ.16ರೊಳಗೆ ಸಲ್ಲಿಸಬೇಕು. ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ) ಕಚೇರಿ (ದೂ.ಸಂ: 0824-2263199)ಯನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News