ಶಾಸಕ ಪ್ರಿಯಾಂಕ್‌ ಖರ್ಗೆಗೆ ಕೊರೋನ ಸೋಂಕು ದೃಢ

Update: 2020-09-19 16:46 GMT
Photo: Facebook

ಬೆಂಗಳೂರು, ಸೆ.19: ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಈ ಕುರಿತು ಶನಿವಾರ ರಾತ್ರಿ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ‘ನನಗೆ ಕೊರೋನ ಸೋಂಕು ದೃಢಪಟ್ಟಿದೆ. ನನಗೆ ರೋಗ ಲಕ್ಷಣಗಳಿಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತಿದ್ದೇನೆ. ಸುರಕ್ಷಿತವಾಗಿರಿ’ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News