ಬೆಂಗಳೂರು: 3,733 ಮಂದಿಗೆ ಕೊರೋನ ಸೋಂಕು ದೃಢ, 33 ಮಂದಿ ಮೃತ್ಯು

Update: 2020-09-19 17:08 GMT

ಬೆಂಗಳೂರು, ಸೆ.19: ನಗರದಲ್ಲಿ ಶನಿವಾರದಂದು 3,733 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 4,180 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಸೋಂಕಿಗೆ 33 ಜನರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರಗೆ ಒಟ್ಟು 1,91,438 ಜನರಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿಯವರೆಗೆ 2,625 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,47,378 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 41,434 ಕೊರೋನ ಸೋಂಕಿತರು ಸಕ್ರಿಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,40,321 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಶುಕ್ರವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 21,558 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 33,140 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ.

ನಗರದಲ್ಲಿ ಒಟ್ಟು 5,17,054 ಜನರನ್ನು ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 6,37,618 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 13,44,848 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.96ರಷ್ಟಿದೆ. ಕೊರೋನ ಸೋಂಕಿಗೆ ಮೃತರಾಗುತ್ತಿರುವ ಪ್ರಮಾಣ ಶೇ.1.39ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.76.32ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News