ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ : 50 ಕುಟುಂಬಗಳ ರಕ್ಷಣೆ,‌ ಎನ್ ಡಿ ಆರ್ ಎಫ್ ಆಗಮನ

Update: 2020-09-20 05:13 GMT

ಉಡುಪಿ: ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಿಂದ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಕೃತಕ‌ ನೆರೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳ ಸಂಚಾರ ಬಂದ್ ಆಗಿದೆ.  ಅಂಬಲಪಾಡಿ, ಮಠದ ಬೆಟ್ಟು, ಗುಂಡಿಬೈಲು, ಬನ್ನಂಜೆ, ‌ಕಾಪು ಸೇರಿದಂತೆ ಹಲವು ಭಾಗದಲ್ಲಿ ನೆರೆ ಹಾವಳಿ‌ ತೀವ್ರವಾಗಿದ್ದು, ಇಲ್ಲಿವರೆಗೆ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. 

ಉಡುಪಿ ಪೊಲೀಸರು, ಅಗ್ನಿಶಾಮಕ ದಳ ತಡರಾತ್ರಿಯಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಉಡುಪಿಗೆ ಎನ್ ಡಿ ಆರ್ ಎಫ್ ಪಡೆಯನ್ನು ಕರೆಸಿ ಕೊಳ್ಳಲಾಗುತ್ತಿದೆ.  ನೆರೆ ಸಂಕಷ್ಟದಲ್ಲಿ ಸಿಲುಕಿದ್ದರೆ ರಕ್ಷಣೆಗೆ ಸಾರ್ವಜನಿಕರು ತುರ್ತು 1077 ಕಂಟ್ರೋಲ್ ರೂಂ ಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಭಾರೀ ಮಳೆಯ ಪರಿಣಾಮ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಆವರಣ, ನಗರದ ರಾಷ್ಟ್ರೀಯ ಹೆದ್ದಾರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ನಗರದ  ಅಂಗಡಿ ಗೋದಾಮುಗಳಿಗೆ ನೀರು ನುಗ್ಗಿದೆ. ಮಲ್ಪೆಯಲ್ಲಿ 3 ಬೋಟ್  ಮುಳುಗಡೆಯಾಗಿದ್ದು, ಲಕ್ಷಾಂತರ ರೂ ನಷ್ಟ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಉಡುಪಿ ನಗರದ ಗುಂಡಿಬೈಲು ಕಲಂಕ ರಸ್ತೆ ಹದಗೆಟ್ಟಿದೆ.  ಬೈಲ್ ಕೆರೆ ಮಠದ ಬೆಟ್ಟು, ಉಡುಪಿ ಮಣಿಪಾಲ್ ಮುಖ್ಯ ರಸ್ತೆಯೂ ಹದಗೆಟ್ಟಿದ್ದು, ಬಡಗೂಪೇಟೆಯ ಹಲವು ಅಂಗಡಿ, ಮನೆಗಳಿಗೆ ನೀರು ನುಗ್ಗಿದೆ.

ಬಂಗಾಳ ಉಪಸಾಗರದಲ್ಲಿ ಸೆ.20ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯ ಪರಿಣಾಮ ರಾಜ್ಯದಲ್ಲಿ ಸೆ. 22ರವರೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಪ್ರಮುಖವಾಗಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ 'ರೆಡ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ.20ರಿಂದ 22ರವರೆಗೆ ಗುಡುಗು ಸಹಿತ ಭಾರೀ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಭಾರಿ ಮಳೆಗೆ ಮಲ್ಪೆಯಲ್ಲಿ 3 ಬೋಟ್  ಮುಳುಗಡೆಯಾಗಿದ್ದು, ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಕಲ್ಲು  ಬಂಡೆ ಮೇಲೆ ಆಶ್ರಯ ಪಡೆದು ಮೀನುಗಾರರು ದಡ ಸೇರಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News