×
Ad

ಉಡುಪಿ; ಪ್ರವಾಹ ಪೀಡಿತ ಪ್ರದೇಶದಲ್ಲಿ ಹೆಲಿಕಾಪ್ಟರ್ ಕಾರ್ಯಾಚರಣೆಗೆ ಪ್ರಸ್ತಾಪ: ಸಚಿವ ಬೊಮ್ಮಾಯಿ

Update: 2020-09-20 13:16 IST

ಉಡುಪಿ, ಸೆ. 20: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕೆಲವು ಗ್ರಾಮಗಳು ಜಲಾವೃತಗೊಂಡಿವೆ. ಕಂದಾಯ ಸಚಿವರೊಂದಿಗೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್‌ನ್ನು ನೀಡಲು ಕೇಳಿಕೊಂಡಿದ್ದೇವೆ ಎಂದು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಜಿಲ್ಲೆಯ ಕೆಲವು ರಸ್ತೆಗಳು ಸಂಪರ್ಕ ಕಡಿತವಾಗಿರುವುದರಿಂದ ತಕ್ಷಣ ರಾಜ್ಯದ ಒಂದು ಎಸ್‌ಡಿಆರ್‌ಎಫ್ ತಂಡದ ಸುಮಾರು 250 ಸದಸ್ಯರನ್ನು ತಡ ರಾತ್ರಿಯೇ ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ 200ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ತಂಡವೂ ಜಿಲ್ಲೆಗೆ ಆಗಮಿಸಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News