2,000 ರೂ. ನೋಟುಗಳ ಮುದ್ರಣ ನಿಲ್ಲಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ: ಸರಕಾರ

Update: 2020-09-20 08:12 GMT

ಹೊಸದಿಲ್ಲಿ: 2,000 ರೂ. ಮುಖಬೆಲೆಯ ನೋಟುಗಳನ್ನು ಮುದ್ರಿಸುವುದನ್ನು ನಿಲ್ಲಿಸಲು ಯಾವುದೇ ನಿರ್ಧಾರಗಳನ್ನು ಕೈಗೊಳ್ಳಲಾಗಿಲ್ಲ ಎಂದು ಹಣಕಾಸು ಸಚಿವಾಲಯ ಲೋಕಸಭೆಗೆ ತಿಳಿಸಿದೆ.

ನಿರ್ದಿಷ್ಟ ಮುಖಬೆಲೆಯ ನೋಟುಗಳನ್ನು ಮುದ್ರಿಸಲು ಆರ್ ಬಿಐ ಜೊತೆ ಸಮಾಲೋಚನೆ ನಡೆಸಿದ ಬಳಿಕ ಸರಕಾರ ನಿರ್ಧರಿಸುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.

“2000 ರೂ. ಮುಖಬೆಲೆಯ ಬ್ಯಾಂಕ್ ನೋಟುಗಳ ಮುದ್ರಣವನ್ನು ನಿಲ್ಲಿಸಲು ಸರಕಾರ ಯಾವುದೇ ನಿರ್ಧಾರಗಳನ್ನು ಕೈಗೊಂಡಿಲ್ಲ” ಎಂದವರು ತಿಳಿಸಿದ್ದಾರೆ.

2020ರ ಮಾರ್ಚ್ 31ರ ವೇಳೆಗೆ 27,398 ಲಕ್ಷ 2000 ಮುಖಬೆಲೆಯ ನೋಟುಗಳು ಚಲಾವಣೆಯಲ್ಲಿದೆ ಎಂದವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News