ಸದ್ಯಕ್ಕೆ ಶಾಲಾ-ಕಾಲೇಜು ಆರಂಭವಿಲ್ಲ: ಶಿಕ್ಷಣ ಇಲಾಖೆ

Update: 2020-09-20 12:27 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ. 20: ಕೋವಿಡ್ ಸೋಂಕು ದಿನೇದಿನೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ/ಅನುದಾನಿತ ಹಾಗೂ ಅನುದಾನ ರಹಿತ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ನಿರ್ಧಾರದಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ.

ಶಾಲಾ ಆರಂಭದ ಬಗ್ಗೆ ಕೇಂದ್ರ ಸರಕಾರದ ಗೃಹ ಮಂತ್ರಾಲಯದ ಆ.28ರ ಮಾರ್ಗಸೂಚಿಯಂತೆ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಶಾಲೆಯನ್ನ ಸೆ.21ರಿಂದ ತೆರೆದು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಬಹುದೆಂದು ಅನುಮತಿ ನೀಡಲಾಗಿದೆ.

ಈ ಸಂಬಂಧ ವಿವರವಾಗಿ ಪರಿಶೀಲಿಸಿದ ನಂತರ ರಾಜ್ಯದಲ್ಲಿ ಕೋವಿಡ್ ಹಬ್ಬುತ್ತಿರುವ ಪ್ರಮಾಣ ಕಡಿಮೆಯಾಗದ ಕಾರಣ, ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮ ಅಲ್ಲ ಎಂದು ಅಭಿಪ್ರಾಯ ಕೇಳಿ ಬಂದಿದೆ.

ಆದ ಕಾರಣ, ಸೆಪ್ಟೆಂಬರ್ ಅಂತ್ಯದವರೆಗೆ ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳ ವಿದ್ಯಾರ್ಥಿಗಳು ಭೇಟಿ ನೀಡಲು ಅನುಮತಿ ನೀಡದಿರಲು ತೀರ್ಮಾನಿಸಲಾಗಿದೆ. ಪರಿಸ್ಥಿತಿಯ ಅವಲೋಕನ ನೋಡಿಕೊಂಡು ಮುಂದಿನ ತೀರ್ಮಾನವನ್ನ ತಿಳಿಸಲಾಗುವುದೆಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಉಮಾಶಂಕರ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News