ಮಡಿಕೇರಿ: ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ

Update: 2020-09-20 15:14 GMT

ಮಡಿಕೇರಿ,ಸೆ.20: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ 24 ಗಂಟೆಯಲ್ಲಿ  5.5 ಇಂಚು ಮಳೆಯಾಗಿದ್ದು, ನದಿ, ಹಳ್ಳ, ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ತೋಳುರು ಶೆಟ್ಟಳ್ಳಿ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದ ಯಡದಂಟೆಯಲ್ಲಿ ಮನೆ ಮೇಲೆ ಮರಬಿದ್ದು ಹಾನಿಯಾಗಿದೆ.

ಗ್ರಾಮದ ಬಿ.ಎಂ.ಮೋಹನ್ ಎಂಬುವವರ ಮನೆ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ಗೋಣಿಕೊಪ್ಪ, ಪಾಲಿಬೆಟ್ಟ ರಸ್ತೆಯಲ್ಲೂ ಬೃಹತ್ ಮರವೊಂದು ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಗ್ರಾಮಸ್ಥರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿದರು. ಗ್ರಾಮೀಣ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನದಿ ವ್ಯಾಪ್ತಿಯ ನಿವಾಸಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News