ಉಡುಪಿ: ಎನ್‌ಡಿಆರ್‌ಎಫ್ ಎರಡು ತಂಡದಿಂದ ರಕ್ಷಣಾ ಕಾರ್ಯಾಚರಣೆ
Update: 2020-09-20 21:45 IST
ಉಡುಪಿ, ಸೆ.20: ಪ್ರವಾಹದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ಆಗಮಿಸಿರುವ ಎನ್‌ಡಿಆರ್‌ಎಫ್ ತಂಡವು ಬೆಳಗ್ಗೆಯಿಂದ ನೆರೆ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ.
ಮೈಸೂರಿನಿಂದ 22 ಜನರ ಹಾಗೂ ಮಂಗಳೂರಿನಿಂದ 30 ಜನರ ಎನ್‌ಡಿಆರ್‌ಎಫ್ ತಂಡ ಜಿಲ್ಲೆಗೆ ಆಗಮಿಸಿ, ಕಾಪು ದಂಡತೀರ್ಥ, ಉಡುಪಿ ಪೆರಂಪಳ್ಳಿ ಹಾಗೂ ಬ್ರಹ್ಮಾವರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಸಿದೆ.