ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2020-09-20 16:17 GMT

ಬೈಂದೂರು, ಸೆ.20: ಕಾರೊಂದು ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ನಾವುಂದ ನಿವಾಸಿ ಎನ್.ಸಿ.ಇಸ್ಮಾಯಿಲ್(55) ಎಂದು ಗುರು ತಿಸಲಾಗಿದೆ. ಪೇಟೆಯಿಂದ ಮನೆ ಕಡೆಗೆ ಹೋಗುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಇಸ್ಮಾಯಿಲ್ ರಸ್ತೆಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟರೆನಟ್ನಲಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News