ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೆ.25ರಂದು ಭಾರತ್ ಬಂದ್‍ಗೆ ಕರೆ

Update: 2020-09-21 13:33 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.21: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಕಿಸಾನ್ ಸಮಿತಿ ವತಿಯಿಂದ ಸೆ.25ರಂದು ಭಾರತ್ ಬಂದ್‍ಗೆ ಕರೆ ನೀಡಲಾಗಿದೆ. 

ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮಿತಿಯ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೆ.25 ರಂದು ದೇಶವ್ಯಾಪಿ ಬಂದ್‍ಗೆ ಕರೆಕೊಟ್ಟಿದ್ದಾರೆ. 

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಬಂದ್ ಆಚರಿಸುವ ಬಗ್ಗೆ ನಾವು ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ರೈತ ಸಂಘದ ಮುಖಂಡ ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News