ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

Update: 2020-09-21 17:21 GMT

ಬೆಂಗಳೂರು, ಸೆ.21: ರಾಜ್ಯ ಸರಕಾರ ಎಲ್‍ಕೆಜಿ, ಯುಕೆಜಿ ಶಿಕ್ಷಣವನ್ನು ಅಂಗನವಾಡಿ ಕೇಂದ್ರದಲ್ಲಿಯೇ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಬೃಹತ್ ಪ್ರತಿಭಟನೆ ನಡೆಸಿದರು.

ಸೋಮವಾರ ನಗರದ ಫ್ರೀಡಂ ಪಾರ್ಕ್ ಮೈದಾನದಲ್ಲಿ  ಕರ್ನಾಟಕ ರಾಜ್ಯ  ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸರಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಘೋಷಣೆ ಕೂಗಿದರು.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ದೇಶದ 8 ಕೋಟಿ ಮಕ್ಕಳ ಹಾಗೂ 1.9 ಕೋಟಿ ತಾಯಂದಿರಿಗೆ ಆಹಾರದ ಹಕ್ಕನ್ನು ಖಾತ್ರಿಗೊಳಿಸಲಾಗಿದೆ. ಇಂತಹ ಮಹತ್ವ ಐಸಿಡಿಎಸ್ ಯೋಜನೆಯನ್ನು ಬಲಗೊಳಿಸುವ ಬದಲು ದುರ್ಬಲಗೊಳಿಸುವ ಕೆಲಸ ಮಾಡಬಾರದೆಂದು ಪ್ರತಿಭಟನಾಕಾರರು ಹೇಳಿದರು.

ಅದೇ ರೀತಿ, ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ನೀಡಬೇಕು. ಪಠ್ಯಪುಸ್ತಕಗಳನ್ನು ಒದಗಿಸಬೇಕು. ಪ್ರಾಥಮಿಕ ಶೈಕ್ಷಣಿಕ ಹಂತಕ್ಕೆ ಹೋಗುವ ಸಂಬಂಧ ಪ್ರಮಾಣ ಪತ್ರ ವಿತರಣೆ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಫೆಡರೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಕಾರ್ಯದರ್ಶಿ ಎಸ್.ಶಿವಣ್ಣ ಸೇರಿದಂತೆ ಪ್ರಮುಖರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News