ಪೊಲೀಸ್ ರಕ್ಷಣೆ ಕೋರಿದ ಗುಲಬರ್ಗಾ ವಿವಿ ಕುಲಸಚಿವ

Update: 2020-09-21 17:23 GMT

ಕಲಬುರ್ಗಿ, ಸೆ.21: ಗುಲಬರ್ಗಾ ವಿವಿಯಲ್ಲಿ ಕಾನೂನು ವ್ಯಾಪ್ತಿ ಮೀರಿ ಸಿಬ್ಬಂದಿ ನೇಮಕಾತಿ, ಶಿಕ್ಷಕೇತರ ಸಿಬ್ಬಂದಿಯ ಆಂತರಿಕ ವರ್ಗಾವಣೆ ಮಾಡುವಂತೆ ಒತ್ತಡ ಹೇರಲಾಗುತ್ತಿದೆ. ಹೀಗಾಗಿ, ನನಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಸಿ.ಸೋಮಶೇಖರ್, ಪೊಲೀಸ್ ಕಮಿಷನರ್ ಅವರಲ್ಲಿ ಮನವಿ ಸಲ್ಲಿಸಿದ್ದಾರೆ.

ವಿವಿಗೆ ಸಂಬಂಧಪಡದ ಜನರು ಬಂದು ದೈನಂದಿನ ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ. ಇದರಿಂದ, ನನಗೆ ಸಮರ್ಪಕವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಈ ಎಲ್ಲ ಬೆಳವಣಿಗೆಯನ್ನು ಗಮನಿಸುತ್ತಿದ್ದರೆ ನನಗೆ ಜೀವಭಯವಿದೆ. ಹೀಗಾಗಿ, ನನಗೆ ರಕ್ಷಣೆ ನೀಡಬೇಕೆಂದು ಪೊಲೀಸ್ ಕಮಿಷನರ್ ಎನ್.ಸತೀಶಕುಮಾರ್ ಅವರನ್ನು ಇತ್ತೀಚೆಗೆ ಖದ್ದು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಆದರೆ, ಕುಲಸಚಿವರು ಯಾವುದೇ ವ್ಯಕ್ತಿಯ ವಿರುದ್ಧವಾಗಲಿ ಅಥವಾ ವಿವಿಯಲ್ಲಿ ಇರುವವರ ವಿರುದ್ಧವಾಗಲಿ ನಿರ್ದಿಷ್ಟ ಆರೋಪ ಮಾಡಿಲ್ಲ. ಅಲ್ಲದೆ, ವಿವಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ್ದಾರೆ.           

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News