ಕಾರಿನಲ್ಲಿ ಗಾಂಜಾ ಸಾಗಾಟ: ನಾಲ್ವರು ಆರೋಪಿಗಳ ಬಂಧನ

Update: 2020-09-22 12:11 GMT

ಶಿವಮೊಗ್ಗ, ಸೆ.22: ಕಾರಿನಲ್ಲಿ ಕಾರ್ಕಳದಿಂದ ತೀರ್ಥಹಳ್ಳಿಗೆ ಸಾಗಿಸುತ್ತಿದ್ದ ಎರಡು ಕೆಜಿ ಗಾಂಜಾವನ್ನು ತೀರ್ಥಹಳ್ಳಿ ಚೆಕ್ ಪೋಸ್ಟ್ ನಲ್ಲಿ ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ಮೂಲದ ಜೀಶನ್, ಜೀನತ್, ಜಬೀರ್, ಮುಬಾರಕ್ ಬಂಧಿತ ಆರೋಪಿಗಳು. ಬಂಧಿತರು ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ತೀರ್ಥಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ಮಾಡುವಾಗ ಗಾಂಜಾ ಪತ್ತೆಯಾಗಿದ್ದು, ಪೊಲೀಸರು ಗಾಂಜಾ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News