ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ದಸಂಸ ಧರಣಿ

Update: 2020-09-22 13:26 GMT

ಬೆಂಗಳೂರು, ಸೆ.22: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಮಂಗಳವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಈ ಕೂಡಲೇ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಡಾ.ಎನ್. ಮೂರ್ತಿ, ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಸರಕಾರಕ್ಕೆ ಸಲ್ಲಿಸಿ 8 ವರ್ಷಗಳಾಗಿವೆ. ಆಯೋಗ ಪರಿಶಿಷ್ಟರ ಒಳ ಮೀಸಲಾತಿ ಜಾರಿಗೆ 25 ವರ್ಷಗಳಿಂದ ರಾಜ್ಯಾದ್ಯಂತ ಹೋರಾಟ ನಡೆದಿದೆ ಎಂದು ತಿಳಿಸಿದರು.

ಸರಕಾರ ದಲಿತ ಸಮುದಾಯವನ್ನು ವಿಭಜಿಸಿ ಮತ ಗಳಿಕೆಯ ರಾಜಕಾರಣ ಮಾಡುತ್ತಿದೆ. ಕೂಡಲೇ ಪ್ರಸಕ್ತ ಚಳಿಗಾಲದ ವಿಧಾನಸಭಾ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡಿಸಿ ಜಾರಿಗೆ ತರಬೇಕು  ಎಂದು ಅವರು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News