ಅಕ್ರಮ ಎಸಗಿದ್ದ ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು: ಸಚಿವ ಸಿ.ಟಿ.ರವಿ

Update: 2020-09-22 13:40 GMT

ಬೆಂಗಳೂರು, ಸೆ.22: ರಾಜ್ಯಾದ್ಯಂತ ಲಾಕ್‍ಡೌನ್ ಸಂದರ್ಭದಲ್ಲಿ ಪಡಿತರ ವಿತರಣೆ ವೇಳೆ ಅಕ್ರಮ ಎಸಗಿದ್ದ ನ್ಯಾಯಬೆಲೆಗಳ ಅಂಗಡಿಗಳ ಪರವಾನಿಗೆ ರದ್ದು ಹಾಗೂ ಹಲವು ಅಂಗಡಿಗಳಿಗೆ ನೋಟಿಸ್ ನೀಡುವ ಮೂಲಕ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಮಂಗಳವಾರ ವಿಧಾನಪರಿಷತ್‍ನಲ್ಲಿ ಪ್ರಶ್ನೋತರ ವೇಳೆಯಲ್ಲಿ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರ ಪರವಾಗಿ ಉತ್ತರಿಸಿದ ಅವರು, ಅಕ್ರಮವೆಸಗಿದ 7 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು ಮಾಡಲಾಗಿದೆ ಹಾಗೂ 531 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ, 100ಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಹಿಂದಿನ ದಿನಗಳಲ್ಲಿ ಕೇಂದ್ರೀಕೃತ ಭ್ರಷ್ಟಚಾರ ನಡೆಯುತ್ತಿತ್ತು. ಆದರೆ, ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ. ಪಡಿತರ ಚೀಟಿ ಹೊಂದಿರುವವರು ಎಲ್ಲಾದರೂ ಹೆಬ್ಬೆಟ್ಟು ಗುರುತು ನೀಡಿ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಮೂಲಕ ಆಹಾರ ಧಾನ್ಯಗಳನ್ನು ಪಡೆಯಬಹುದಾಗಿದೆ. ಇವೆರಡೂ ಸಾಧ್ಯವಾಗದಿದ್ದಲ್ಲಿ ಅನುಮತಿ ಪಡೆದು ಒಂದಿಬ್ಬರು ನೇರವಾಗಿಯೂ ಆಹಾರ ಧಾನ್ಯಗಳನ್ನು ಪಡೆಯಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News