24ರಿಂದ ಮಂಗಳೂರು-ಮುಂಬೈ ಮಧ್ಯೆ ಕೆಎಸ್ಸಾರ್ಟಿಸಿ ಬಸ್ ಸಂಚಾರ

Update: 2020-09-22 14:32 GMT

ಉಡುಪಿ, ಸೆ.22: ಮಂಗಳೂರು ವಿಭಾಗದ ಮಂಗಳೂರು ಬಸ್ಸು ನಿಲ್ದಾಣ ದಿಂದ ಪೂನಾ ಹಾಗೂ ಮುಂಬೈಗೆ ಸಾರ್ವಜನಿಕರ ಬೇಡಿಕೆ ಗನುಗುಣವಾಗಿ ವೋಲ್ವೋ ಹಾಗೂ ನಾನ್‌ ಎ.ಸಿ. ಸ್ಲೀಪರ್ ಸಾರಿಗೆ ಸೌಲಭ್ಯವನ್ನು ಸೆ.24ರಿಂದ ಆರಂಭಿಸಲಾಗುತ್ತದೆ.

ಈ ಹಿನ್ನಲೆಯಲ್ಲಿ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ನಿಗಮದ ಎಸ್‌ಒಪಿ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುವುದು.

ಈ ಸಾರಿಗೆಗಳಿಗೆ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದ್ದು ಇದಕ್ಕಾಗಿ - www.ksrtc.in - ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್‌ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News