ದ.ಕ. ಜಿಲ್ಲೆ : 211 ಮಂದಿಗೆ ಕೊರೋನ ಸೋಂಕು, ಕೋವಿಡ್‌ನಿಂದ ನಾಲ್ವರು ಮೃತ್ಯು

Update: 2020-09-22 14:53 GMT

ಮಂಗಳೂರು, ಸೆ. 22: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದಾಗಿ ನಾಲ್ವರು ಮೃತಪಟ್ಟು, 211 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮಂಗಳೂರು ತಾಲೂಕಿನಲ್ಲಿ ಇಬ್ಬರು, ಬಂಟ್ವಾಳ ಹಾಗೂ ಹೊರಜಿಲ್ಲೆಯ ತಲಾ ಓರ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ 494ಕ್ಕೆ ಏರಿಕೆಯಾಗಿದೆ.
ಮಂಗಳವಾರ 211 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸಾಮಾನ್ಯ ಶೀತ ಲಕ್ಷಣ-94, ಸೋಂಕಿತರ ಸಂಪರ್ಕದಲ್ಲಿದ್ದ 61 ಮಂದಿ, ತೀವ್ರ ಉಸಿರಾಟ ತೊಂದರೆಯಲ್ಲಿದ್ದ 12 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. 44 ಮಂದಿಗೆ ಯಾರಿಂದ ಸೋಂಕು ತಗುಲಿದೆ ಎನ್ನುವುದನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚುತ್ತಿದ್ದಾರೆ.

ಮಂಗಳೂರು ತಾಲೂಕಿನಲ್ಲಿ 111 ಮಂದಿಗೆ ಸೋಂಕು ತಗುಲಿದೆ. ಇನ್ನು, ಬಂಟ್ವಾಳ-43, ಪುತ್ತೂರು-17, ಬೆಳ್ತಂಗಡಿ-19, ಸುಳ್ಯ-1, ಹೊರಜಿಲ್ಲೆಯ 20 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20,578ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ 39 ಮಂದಿ, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 170 ಮಂದಿ ಸೇರಿದಂತೆ 209 ಮಂದಿ ಕೊರೋನದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನದಿಂದ ಗುಣಮುಖರಾದವರ ಸಂಖ್ಯೆ 15,714ಕ್ಕೆ ಹೆಚ್ಚಿದೆ. ಜಿಲ್ಲೆಯಲ್ಲಿ 4,369 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News