ಸೆ.23ರಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

Update: 2020-09-22 15:48 GMT

ಬೆಂಗಳೂರು, ಸೆ. 22: ವಿಧಾನ ಮಂಡಲ ಅಧಿವೇಶದಲ್ಲಿ ಪ್ರಸ್ತಾಪಿಸಬೇಕಿರುವ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆ(ಸೆ.23) ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಬೆಳಗ್ಗೆ 9.30ಕ್ಕೆ ವಿಧಾನಸೌಧದಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಈ ಸಂಬಂಧ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶಂಪೂರ್ ತಮ್ಮ ಪಕ್ಷದ ಎಲ್ಲ ಶಾಸಕರಿಗೂ ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.

ವಿಧಾನ ಮಂಡಲ ಅಧಿವೇಶನದಲ್ಲಿ ಯಾವ ಯಾವ ವಿಷಯಗಳ ಬಗ್ಗೆ ಆದ್ಯತೆ ನೀಡಿ ಚರ್ಚೆ ಮಾಡಬೇಕು. ಪಕ್ಷ ಯಾವ ನಿಲುವು ತಳೆಯಬೇಕು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.

ಭೂ ಸುಧಾರಣೆ, ಎಪಿಎಂಸಿ, ಕೈಗಾರಿಕಾ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸುತ್ತಿರುವ ಜೆಡಿಎಸ್ ಅಧಿವೇಶದನಲ್ಲಿಯೂ ಈ ವಿಚಾರಗಳನ್ನು ಪ್ರಸ್ತಾಪಿಸುವ ಸಾಧ್ಯತೆಗಳಿವೆ. ಅಲ್ಲದೆ, ನೆರೆ ಹಾವಳಿ, ನಿರುದ್ಯೋಗ, ಕೊರೋನ ಪರಿಹಾರ ಪ್ಯಾಕೇಜ್‍ನಲ್ಲಿನ ಲೋಪದೋಷಗಳು ಸೇರಿದಂತೆ ರಾಜ್ಯ ಸರಕಾರದ ವೈಫಕ್ಯಗಳನ್ನು ಪ್ರಸ್ತಾಪಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿಗೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News