ಐಪಿಎಲ್: ಚೆನ್ನೈಗೆ 217 ರನ್ ಗುರಿ ನೀಡಿದ ರಾಜಸ್ಥಾನ

Update: 2020-09-22 15:58 GMT

 ಶಾರ್ಜಾ, ಸೆ.22:ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಹಾಗೂ ನಾಯಕ ಸ್ಟೀವ್ ಸ್ಮಿತ್ ಅರ್ಧಶತಕದ ಕೊಡುಗೆಯ ಬೆಂಬಲದಿಂದ ರಾಜಸ್ಥಾನ ರಾಯಲ್ಸ್ ತಂಡ ಐಪಿಎಲ್‌ನ 4ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿಗೆ 217 ರನ್ ಗುರಿ ನೀಡಿದೆ.

 ಟಾಸ್ ಜಯಿಸಿದ ಚೆನ್ನೈ ನಾಯಕ ಧೋನಿ ರಾಜಸ್ಥಾನವನ್ನು ಬ್ಯಾಟಿಂಗ್‌ಗೆ ಇಳಿಸಿದರು. ರಾಜಸ್ಥಾನ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 216 ರನ್ ಗಳಿಸಿತು.

. 3ನೇ ಓವರ್‌ನಲ್ಲಿ ಯಶಸ್ವಿ ಜೈಸ್ವಾಲ್‌ರನ್ನು ಕಳೆದುಕೊಂಡ ರಾಜಸ್ಥಾನ ಆರಂಭಿಕ ಆಘಾತ ಅನುಭವಿಸಿತ್ತು. ಆಗ ತಂಡಕ್ಕೆ ಆಸರೆಯಾದ ಕೇರಳದ ಬ್ಯಾಟ್ಸ್‌ಮನ್ ಸ್ಯಾಮ್ಸನ್ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಅಬ್ಬರಿಸಿದರು. 74 ರನ್‌ಗೆ ವಿಕೆಟ್ ಒಪ್ಪಿಸಿದ ಸ್ಯಾಮ್ಸನ್ 32 ಎಸೆತಗಳಲ್ಲಿ 1 ಬೌಂಡರಿ ಹಾಗೂ 6 ಸಿಕ್ಸರ್‌ಗಳನ್ನು ಸಿಡಿಸಿದರು. 

47 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 4 ಬೌಂಡರಿ ಸಹಿತ 69 ರನ್ ಗಳಿಸಿದ ನಾಯಕ ಸ್ಮಿತ್ ಅವರು ಸ್ಯಾಮ್ಸನ್‌ರೊಂದಿಗೆ 2ನೇ ವಿಕೆಟ್‌ಗೆ 121 ರನ್ ಜೊತೆಯಾಟ ನಡೆಸಿ ಉತ್ತಮ ಆರಂಭ ಒದಗಿಸಿಕೊಟ್ಟರು. ಆದರೆ, ಈ ಇಬ್ಬರು ಬೇರ್ಪಟ್ಟ ಬಳಿಕ ಗಮನಾರ್ಹ ಜೊತೆಯಾಟ ಮೂಡಿಬರಲಿಲ್ಲ. ಬೇರೆ ಯಾವ ಬ್ಯಾಟ್ಸ್‌ಮನ್ ದೊಡ್ಡ ಮೊತ್ತ ಗಳಿಸಲಿಲ್ಲ. ಬಾಲಂಗೋಚಿ ಆರ್ಚರ್ ಔಟಾಗದೆ 27 ರನ್ ಗಳಿಸಿದರು.

ಚೆನ್ನೈ ಪರ ಸ್ಯಾಮನ್ ಕರ್ರನ್(3-33) ಯಶಸ್ವಿ ಬೌಲರ್ ಎನಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News