ವಿದ್ಯಾರ್ಥಿಗಳ ಹಿತ ಕಾಪಾಡಿ: ಸಿಬಿಎಸ್‌ಇ, ಯುಜಿಸಿಗೆ ಸುಪ್ರೀಂ ಕೋರ್ಟ್ ಸೂಚನೆ

Update: 2020-09-22 16:26 GMT

ಹೊಸದಿಲ್ಲಿ, ಸೆ. 22: ಪ್ರಸಕ್ತ ಸಾಲಿನ 12ನೇ ತರಗತಿಯ ಪೂರಕ ಪರೀಕ್ಷೆಯ ಫಲಿತಾಂಶವನ್ನು ತ್ವರಿತವಾಗಿ ಪ್ರಕಟಿಸಬೇಕು ಎಂದು ಸಿಬಿಎಸ್‌ಇಗೆ ಸಲಹೆ ನೀಡಿರುವ ಸುಪ್ರೀಂ ಕೋರ್ಟ್, ವಿಶೇಷ ಸಂದರ್ಭವಾಗಿರುವುದರಿಂದ ಈ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಯುಜಿಸಿಗೆ ಸೂಚಿಸಿದೆ. ಇಂದು (ಸೆ.22) ಆರಂಭಗೊಂಡ ಪೂರಕ ಪರೀಕ್ಷೆಗಳು ಸೆ. 29ರ ವರೆಗೆ ನಡೆಯಲಿದೆ. 2 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ವಿದ್ಯಾರ್ಥಿಗಳ ಶೈಕ್ಷಣಿಕ ಅವಧಿಗೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಎ.ಎಂ. ಕಾನ್ವಿಲ್ಕರ್, ಸಂಜೀವ್ ಖನ್ನಾ ಅವರಿದ್ದ ಪೀಠ ವಿಚಾರಣೆ ನಡೆಸಿತು. ಯುಜಿಸಿಯ ಪದವಿಗೆ ಸಂಬಂಧಿಸಿದ್ದ ವೇಳಾಪಟ್ಟಿಯನ್ನು ಯಾವುದೇ ಸಂದರ್ಭದಲ್ಲಿ ಪ್ರಕಟಿಸಬಹುದು ಎಂದು ಯುಜಿಸಿ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಸೆ. 24ರ ವರೆಗೆ ವೇಳಾಪಟ್ಟಿಯನ್ನು ಪ್ರಕಟಿಸಬಾರದು ಎಂದು ಸೂಚಿಸಿದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಸೆ. 24ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News