ಉಪಮುಖ್ಯಮಂತ್ರಿ ಗೋವಿಂದ ಕಾರಜೋಳಗೆ ಕೊರೋನ ಸೋಂಕು ದೃಢ

Update: 2020-09-22 16:30 GMT

ಬೆಂಗಳೂರು, ಸೆ.22: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೋನ ಸೋಂಕು ಪಾಸಿಟಿವ್ ಬಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢ ಪಟ್ಟಿದ್ದು, ನನಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆ ವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್ ನಲ್ಲಿರುವಂತೆ ಎಂದು‌ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News