ಮಾಜಿ ಸಚಿವ ಝಮೀರ್ ವಿರುದ್ಧ ಮುಖ್ಯಮಂತ್ರಿಗೆ ದೂರು ನೀಡಿದ ಪ್ರಶಾಂತ್ ಸಂಬರಗಿ

Update: 2020-09-22 16:39 GMT

ಬೆಂಗಳೂರು, ಸೆ.22: ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ವಿದೇಶ ಪ್ರವಾಸ ಮಾಡಿರುವ ಬಗ್ಗೆ ಸರಕಾರಕ್ಕೆ ಯಾವುದೇ ಮಾಹಿತಿ ನೀಡಿಲ್ಲ. ಈ ಸಂಬಂಧ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ಸಲ್ಲಿಸಿದರು.

ಮಂಗಳವಾರ ನಗರದ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಅವರು, ಝಮೀರ್ ಅಹ್ಮದ್ ಯಾವುದೇ ಮಾಹಿತಿ ನೀಡದೆ, ಕಾನೂನು ಉಲ್ಲಂಘನೆ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕೋರಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಶಾಂತ್ ಸಂಬರಗಿ, ಆರ್‌ಟಿಐ ಮೂಲಕವೂ ಅವರ ಪ್ರವಾಸದ ಬಗ್ಗೆ ಮಾಹಿತಿ ಸಿಗುತ್ತಿಲ್ಲ. ಈ ಹಿಂದೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದಾಗಲೂ ಅವರು ಮಾಹಿತಿ ನೀಡಿಲ್ಲ ಎಂದು ದೂರಿದರು.

ಚುನಾಯಿತ ಜನಪ್ರತಿನಿಧಿ ನಿಯಮಗಳ ಪ್ರಕಾರ ಮಾಹಿತಿ ನೀಡಬೇಕಿತ್ತು. ಆದರೆ, ಸರಕಾರಕ್ಕೆ ಯಾವುದೇ ಮಾಹಿತಿ ನೀಡದೇ ಹೋಗಿದ್ದಾರೆ. ಶಾಸಕರಾಗಿ ಅವರು ಸ್ಪೀಕರ್ ಅವರಿಗಾದರೂ ಮಾಹಿತಿ ನೀಡಬೇಕಿತ್ತು. ಇದರಲ್ಲಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ, ಅವರ ವಿರುದ್ಧ ತನಿಖೆ ನಡೆಸಬೇಕೆಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News