ಆಯುಷ್ ವೈದ್ಯರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ

Update: 2020-09-22 16:46 GMT

ಬೆಂಗಳೂರು, ಸೆ.22: ಆಯುಷ್ ವೈದ್ಯರಿಗೆ ವೇತನ ತಾರತಮ್ಯ, ಸಮ್ಮಿಶ್ರ ವೈದ್ಯಕೀಯ ಪದ್ದತಿ ಅನುಸರಿಸಲು ತಡೆಯಾಗುತ್ತಿರುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಸಮ್ಮಿಶ್ರ ವೈದ್ಯಕೀಯ ಸಂಘದ ವತಿಯಿಂದ ಆಯುಷ್ ಕಚೇರಿಯ ಮುಂದೆ ಸಾಂಕೇತಿಕ ಧರಣಿ ನಡೆಸಲಾಯಿತು.

ನಂತರ ಆರೋಗ್ಯ ಸಚಿವ ಶ್ರೀರಾಮುಲುರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಆಯುಷ್ ವೈದ್ಯರು ಅಲೋಪತಿ ಔಷಧಿಗಳ ಬಳಕೆಯ ಆದೇಶವನ್ನು ಹಿಂಪಡೆಯಲಾಗಿದೆ. ಆ ಮೂಲಕ ಆಯುಷ್ ವೈದ್ಯರನ್ನು ಅವಕಾಶ ವಂಚಿತರನ್ನಾಗಿ ಮಾಡಿದಂತಾಗಿದೆ ಎಂದು ಆರೋಪಿಸಿದ್ದಾರೆ.

ಸರಕಾರಿ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ವೈದ್ಯ ಪದ್ಧತಿಗಳ ವೈದ್ಯರಿಗೆ (ಆಯುಷ್ ಪದ್ಧತಿಗಳು) ವೇತನ ತಾರತಮ್ಯ ಆಗುತ್ತಿದೆ. ಈ ಸಮಸ್ಯೆಯನ್ನು ಶೀಘ್ರವಾಗಿ ಬಗೆ ಹರಿಸಿಕೊಡಬೇಕೆಂದು ಎನ್‍ಐಎಂಎ ರಾಜ್ಯಾಧ್ಯಕ್ಷ ಡಾ.ಭೂಸನೂರ ಮಠ್ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News