ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಟೋ ಚಾಲಕರ ಧರಣಿ

Update: 2020-09-22 17:02 GMT

ಬೆಂಗಳೂರು, ಸೆ.22: ಅರ್ಹತಾ ಪತ್ರ ನೀಡುವುದು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಆಗ್ರಹಿಸಿದೆ.

ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು, ಎಲ್‍ಪಿಜಿಯಿಂದ ಚಲಾಯಿಸುವ 4 ಸ್ಟ್ರೋಕ್ ಆಟೋ ರಿಕ್ಷಾಗಳಿಗೆ ಅರ್ಹತಾ ಪತ್ರ ಕೊಡಲು ನಿರಾಕರಿಸುವ ಮೂಲಕ ಸಾರಿಗೆ ಆಯುಕ್ತರು ಹಾಗೂ ಆರ್‍ಟಿಓ ಕಚೇರಿಯ ವಾಹನ ನಿರೀಕ್ಷಕರು ತಮ್ಮ ಕಾರ್ಯ ವ್ಯಾಪ್ತಿ ಮೀರಿ ಅಧಿಕಾರ ಚಲಾಯಿಸಲು ಹೊರಟಿದ್ದಾರೆ ಆರೋಪಿಸಿದರು.

ಈಗಾಗಲೇ ಕೊರೋನ ಲಾಕ್‍ಡೌನ್‍ನಿಂದಾಗಿ ಆಟೊ ಚಾಲಕರು ಸಂಕಷ್ಟದಲ್ಲಿದ್ದಾರೆ. ಪ್ರತಿದಿನ 100ರಿಂದ 200 ರೂ. ಗಳಿಸಲು ಸಾಧ್ಯವಾಗದೆ ಕಂಗಾಲಾಗಿದ್ದಾರೆ. ಆದರೆ ಸ್ವಾರ್ಥಕ್ಕಾಗಿ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಮೀರಿ ಆಟೊ ರಿಕ್ಷಾಗಳ ಅರ್ಹತಾ ಪತ್ರ ನೀಡಲು ಮಾಡಲು ನಿರಾಕರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಎಸ್.ಜಯರಾಂ, ಉಪಾಧ್ಯಕ್ಷ ರುದ್ರಮೂರ್ತಿ, ಕಾರ್ಯಾಧ್ಯಕ್ಷ ಎಂ.ವೆಂಕಟೇಗೌಡ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News