ಕೇರಳದಲ್ಲಿ 100ಕ್ಕೂ ಅಧಿಕ ಪೊಲೀಸರಿಗೆ ಕೊರೋನ, ಪ್ರತಿಪಕ್ಷಗಳ ಪ್ರತಿಭಟನೆ ದೂಷಿಸಿದ ಸಿಎಂ

Update: 2020-09-22 18:09 GMT

ಕೊಚ್ಚಿ, ಸೆ.22: ಕೋವಿಡ್-19 ಶಿಷ್ಟಾಚಾರವನ್ನು ಉಲ್ಲಂಘಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿರುವ ವಿಪಕ್ಷಗಳ ಮೇಲೆ ಹರಿಹಾಯ್ದಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್,ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಿದರು. 100ಕ್ಕೂ ಅಧಿಕ ಪೊಲೀಸರಿಗೆ ಕೊರೋನ ವೈರಸ್ ಸೋಂಕು ತಗಲಿದೆ ಎಂದಿದ್ದಾರೆ.

 "ಕಳೆದ ಕೆಲವು ವಾರಗಳಲ್ಲಿ ಒಟ್ಟು 101 ಪೊಲೀಸರು ವಿಪಕ್ಷಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ನಿಯಂತ್ರಣದಲ್ಲಿ ಭಾಗಿಯಾಗಿದ್ದರು. ಇವರೆಲ್ಲರಿಗೂ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ'' ಎಂದು ಸುದ್ದಿಗೋಷ್ಠಿಯಲ್ಲಿ ವಿಜಯನ್ ತಿಳಿಸಿದರು.

ಸೋಂಕಿತರ ಪ್ರಾಥಮಿಕ ಸಂಪರ್ಕ ಪಟ್ಟಿಯಲ್ಲಿರುವ ಕನಿಷ್ಠ 164 ಅಧಿಕಾರಿಗಳು ಹಾಗೂ ಹೆಚ್ಚುವರಿ 171 ಅಧಿಕಾರಿಗಳು ಕ್ವಾರಂಟೈನ್‌ನಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News