ರೈತ ವಿರೋಧಿ ಕಾನೂನು ವಿರೋಧಿಸಿ ಸೆ.28ರಂದು ಪ್ರತಿಭಟನೆ

Update: 2020-09-22 18:24 GMT

ಬೆಂಗಳೂರು, ಸೆ.22: ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೆ.28ರಂದು ನಗರದ ಮೌರ್ಯ ಸರ್ಕಲ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಯಲಹಂಕ ಉಪನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ವಿ.ಆರ್.ನಾರಾಯಣರೆಡ್ಡಿ, ಮಳೆ ಹಾನಿ, ಪ್ರಕೃತಿ ವಿಕೋಪಗಳಿಂದಾಗಿ ರೈತನ ಬೆಳೆ ಹಾನಿ ಒಂದೆಡೆಯಾದರೆ, ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತ ವಿರೋಧಿ ಕಾನೂನುಗಳನ್ನು ರೂಪಿಸುವ ಮೂಲಕ ರೈತರನ್ನು ಮುಗಿಸಲು ಹೊರಟಿವೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಬೆಂ.ಜಿಲ್ಲಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಶ್ರೀನಿವಾಸ ರೆಡ್ಡಿ, ರೈತ ಮುಖಂಡ ನಾಗರಾಜರೆಡ್ಡಿ, ಮಂಜುನಾಥ್ ಸೇರಿದಂತೆ ಇನ್ನಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News