ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲೇ ಮಹಿಳೆ ಆತ್ಮಹತ್ಯೆಗೆ ಯತ್ನ

Update: 2020-09-23 12:10 GMT
ಸಾಂದರ್ಭಿಕ ಚಿತ್ರ

ಕಲಬುರಗಿ, ಸೆ.23: ಪಾದ್ರಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ನಗರದ ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಪಾದ್ರಿಯು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ, ಮನನೊಂದು ಕಚೇರಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಸೇಂಟ್ ಮೇರಿ ಕ್ಯಾಥೇಡ್ರಲ್ ಚರ್ಚ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆಗೆ ಪಾದ್ರಿ ಕ್ಲೀವನ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಮಹಿಳೆಯು ಸೈಬರ್ ಕ್ರೈಂ ಠಾಣೆಗೆ ವಿಚಾರಣೆಗೆ ಆಗಮಿಸಿದ ವೇಳೆ ತನಗೆ ನ್ಯಾಯ ಸಿಗುವುದಿಲ್ಲ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸಂತ್ರಸ್ತೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News