ಅಂಗನವಾಡಿಗೆ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆ ಆಹ್ವಾನ

Update: 2020-09-23 12:48 GMT

ಉಡುಪಿ, ಸೆ.23: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಇವರ ಕಛೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ. ಇದಕ್ಕೆ ಯಾರಿಗಾದರೂ ಆಕ್ಷೇಪಣೆಗಳಿದ್ದಲ್ಲಿ ಸೆ.25ರ ಒಳಗೆ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಇವರಿಗೆ ಖುದ್ದಾಗಿ ಅಥವಾ ಕಚೇರಿಗೆ ಸಲ್ಲಿಸುವಂತೆ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇದಕ್ಕೆ ಯಾರಿಗಾದರೂ ಆಕ್ಷೇಪಣೆಗಳಿದ್ದಲ್ಲಿ ಸೆ.25ರ ಒಳಗೆ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಇವರಿಗೆ ಖುದ್ದಾಗಿ ಅಥವಾ ಕಚೇರಿಗೆ ಸಲ್ಲಿಸುವಂತೆ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಕುಂದಾಪುರ: ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ ಇವರ ಕಚೇರಿ ನೋಟೀಸ್ ಬೋರ್ಡಿನಲ್ಲಿ ಹಾಕಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಸೆ.25ರೊಳಗೆ ಶಿಶು ಅಭಿವೃದ್ಧಿ ಯೋಜನೆ, ಕುಂದಾಪುರ ಇವರಿಗೆ ಸಲಿ್ಲಸಬಹುದು ಎಂದು ಪ್ರಕಟಣೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News