×
Ad

ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

Update: 2020-09-23 19:44 IST

ಉಡುಪಿ, ಸೆ.23: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಬಿ ಪ್ರವರ್ಗದ 8 ಮತ್ತು ಸಿ ಪ್ರವರ್ಗದ 44 ಅಧಿಸೂಚಿತ ಸಂಸ್ಥೆಗಳು/ದೇವಸ್ಥಾನ ಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾಧಿಗಳು/ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸಹಾಯಕ ಆಯುಕ್ತರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಕ್ಟೋಬರ್ 21ರೊಳಗೆ ಸಹಾಯಕ ಆಯುಕ್ತರು, ಹಿಂದೂಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಉಡುಪಿ ಇವರಿಗೆ ಸಲ್ಲಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News