ಹಿರಿಯಡಕ: ಆರೋಗ್ಯ ಅರಿವು ಕಾರ್ಯಕ್ರಮ

Update: 2020-09-23 14:17 GMT

ಉಡುಪಿ, ಸೆ.23: ಜಿಲ್ಲಾ ಆರೋಗ್ಯ ಮತ್ತು ಕು.ಕ. ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹದಿಹರೆಯದವರಿಗೆ ಆರೋಗ್ಯ ಅರಿವು ಕಾರ್ಯಕ್ರಮ ಮಂಗಳವಾರ ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್ ಕಾರ್ಯಕ್ರಮ ಉದ್ಘಾಟಿಸಿ, ಇಲಾಖೆ ವತಿಯಿಂದ ನಡೆಯುವ ಈ ಮಾಹಿತಿ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅದರ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಪಂಚಾಯತ್ ನೊಡಲ್ ಅಧಿಕಾರಿ ಡಾ.ಉದಯ್‌ಕುಮಾರ್ ಶೆಟ್ಟಿ ಕರಪತ್ರ ಬಿಡುಗಡೆ ಮಾಡಿ, ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವು ದಕ್ಕಿಂತ ಕಾಯಿಲೆ ಬಾರದಂತೆ ತಡೆಗಟ್ಟುವುದು ಉತ್ತಮ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸತ್ಯಶಂಕರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಯಬಾಯಿ ಕೆ. ಭಾಗವಹಿಸಿದ್ದರು. ಅರ್ಚನಾ ಸ್ವಾಗತಿಸಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು. ಮಧು ಕೆ.ಎನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News