ವಿಶ್ವ ಹಿರಿಯ ನಾಗರಿಕರ ದಿನಾಚರಣೆಗೆ ಪೂರ್ವಭಾವಿ ಸಭೆ

Update: 2020-09-23 14:19 GMT

ಉಡುಪಿ, ಸೆ.23: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕೇಂದ್ರ ಕಚೇರಿ ನಿರ್ದೇಶನದಂತೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಕ್ಟೋಬರ್ 1ರಂದು ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಯನ್ನು ಆಚರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿರಿಯ ನಾಗರಿಕರ ಸಂಖ್ಯೆ 100ನ್ನು ಮೀರಬಾರದು. ಕಾರ್ಯಕ್ರಮ ನಡೆಯುವ ಸ್ಥಳವನ್ನು 2 ದಿನ ಮುಂಚಿತವಾಗಿ ಸ್ಯಾನಿಟೈಸ್ ಮಾಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿರಿಯ ನಾಗರಿಕರ ಥರ್ಮಲ್ ಸ್ಕಾನಿಂಗ್, ಸ್ಯಾನಿಟೈಸ್, ಶುಗರ್ ಟೆಸ್ಟ್ ಮಾಡಿಸಿ ಸಭಾಂಗಣದ ಒಗೆ ಪ್ರವೇಶಿಸುವಂತೆ ಎಚ್ಚರ ವಹಿಸಬೇಕು ಎಂದರು.

ಕೋವಿಡ್-19ರ ಬಗ್ಗೆ ಹಿರಿಯ ನಾಗರಿಕರು ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸುವಂತೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರಿೆ ಸನ್ಮಾನಿಸಲಾಗುವುದು ಎಂದರು.

ಸಭೆಯಲ್ಲಿ ಉಡುಪಿ ಜಿಲ್ಲಾ, ತಾಲ್ಲೂಕು ಮಟ್ಟದ ಹಿರಿಯ ನಾಗರಿಕ ಸಂಸ್ಥೆಯ ಮುಖ್ಯಸ್ಥರು, ಹಿರಿಯನಾಗರಿಕರ ಸಹಾಯವಾಣಿಯ ಸಿಬ್ಬಂದಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News