ಪೌರ ಕಾರ್ಮಿಕರನ್ನು ತಾಯ್ತನದಿಂದ ಕಾಣಬೇಕು: ಎಚ್.ಡಿ.ಕುಮಾರಸ್ವಾಮಿ

Update: 2020-09-23 14:49 GMT

ಬೆಂಗಳೂರು, ಸೆ.23: ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ. ಪೌರಕಾರ್ಮಿಕ ದಿನಾಚರಣೆಯ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕೊರೋನ ಸಂಕಷ್ಟದ ಈ ದಿನಗಳಲ್ಲಿ ಜನರ ಆರೋಗ್ಯದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರು ವೈದ್ಯ ಸಮೂಹದಷ್ಟೇ ಪ್ರಧಾನ ಪಾತ್ರ ವಹಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ತವ್ಯ ನಿರತ ಪೌರಕಾರ್ಮಿಕರು ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಸರಕಾರ ನೀಡಬೇಕು. ಹಣರೂಪದ ಪರಿಹಾರ ಸರಕಾರದ ಆಡಳಿತಾತ್ಮಕ ಕರ್ತವ್ಯವಾಗುತ್ತದೆ. ಪೌರಕಾರ್ಮಿಕ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜ ಗೌರವವಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News