​ಎನ್‌ಎಚ್‌ಎಂ ಸಿಬ್ಬಂದಿ ಪ್ರತಿಭಟನೆ: ಪ್ರಕಟವಾಗದ ಕೋವಿಡ್ ವರದಿ

Update: 2020-09-23 15:13 GMT

ಮಂಗಳೂರು, ಸೆ. 23: ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಸಿಬ್ಬಂದಿಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಿನ್ನೆಲೆ ಬುಧವಾರದ ದ.ಕ. ಜಿಲ್ಲೆಯ ಕೋವಿಡ್ ವರದಿ ಪ್ರಕಟವಾಗಿಲ್ಲ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಾರಿ ತಿಳಿಸಿದ್ದಾರೆ.

ಎನ್‌ಎಚ್‌ಎಂ ಸಿಬ್ಬಂದಿಯ ರಾಜ್ಯದ್ಯಂತ ಪ್ರತಿಭಟನೆಗೆ ಇಳಿದಿದ್ದಾರೆ. ಈ ವಿಷಯದ ಬಗ್ಗೆ ಈಗಾಗಲೇ ರಾಜ್ಯ ವಿಧಾನಮಂಡಲದಲ್ಲಿ ಚರ್ಚೆ ನಡೆಯುತ್ತಿದೆ. ಗುರುವಾರ ಈ ಬಗ್ಗೆ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವಾರ ವೈದ್ಯರು ಹಾಗೂ ವೈದ್ಯ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರಿಂದಲೂ ಮೂರು ದಿನಗಳವರೆಗೆ ಕೋವಿಡ್ ವರದಿ ಪ್ರಕಟವಾಗಿರಲಿಲ್ಲ. ವೈದ್ಯ ಸಿಬ್ಬಂದಿ ಬೇಡಿಕೆ ಈಡೇರಿಸುವುದಾಗಿ ಸರಕಾರ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ವಾಪಸ್ ಪಡೆದಿದ್ದರು. ಇದರ ಬೆನ್ನಲ್ಲೇ, ಎನ್‌ಎಚ್ಚೆಂ ಸಿಬ್ಬಂದಿ ಪ್ರತಿಭಟನೆಗೆ ಮುಂದಾಗಿದ್ದರಿಂದ ಬುಧವಾರದ ಕೋವಿಡ್ ಪ್ರಕಟವಾಗುವಲ್ಲಿ ವ್ಯತ್ಯಯವಾಗಿದೆ.

ರಾಜ್ಯ ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಟಗೊಂಡಿದ್ದು, ದ.ಕ. ಜಿಲ್ಲೆಯಲ್ಲಿ ಬುಧವಾರ 186 ಮಂದಿಗೆ ಕೊರೋನ ಸೋಂಕು ತಗುಲಿದೆ. ಆದರೆ, ವರದಿಯಲ್ಲಿ ಕೊರೋನದಿಂದ ಮೃತಪಟ್ಟವರು ಹಾಗೂ ಗುಣಮುಖರಾದವರ ಬಗ್ಗೆ ಯಾವುದೇ ಮಾಹಿತಿಯನ್ನು ನಮೂದಿಸಿಲ್ಲ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News