ಬೈಂದೂರು ಪಟ್ಟಣ ಪಂಚಾಯತ್ ಅಸ್ತಿತ್ವಕ್ಕೆ : ಬೈಂದೂರು ತಹಶೀಲ್ದಾರ್ ಆಡಳಿತಾಧಿಕಾರಿ

Update: 2020-09-23 17:13 GMT

ಉಡುಪಿ, ಸೆ.23: ಜಿಲ್ಲೆಯ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಂದೂರು, ಯಡ್ತರೆ ಹಾಗೂ ಪಡುವರಿ ಗ್ರಾಮಗಳನ್ನೊಳಗೊಂಡ ಗ್ರಾಮ ಪಂಚಾಯತ್ ಪ್ರದೇಶವನ್ನು ಬೈಂದೂರು ಪಟ್ಟಣ ಪಂಚಾಯತ್‌ಯನ್ನಾಗಿ ಮೇಲ್ದರ್ಜೆಗೇರಿಸಿ ರಾಜ್ಯ ಸರಕಾರ ಅಂತಿಮ ಅಧಿಸೂಚನೆ ಯನ್ನು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

ಹೀಗಾಗಿ ಇನ್ನು ಮುಂದೆ ಬೈಂದೂರು ಪಟ್ಟಣ ಪಂಚಾಯತ್ ಆಗಿ ಕಾರ್ಯ ನಿರ್ವಹಿಸಲಿದೆ. ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಸೆಕ್ಷನ್ 315ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಕಾರ್ಯನಿರ್ವಹಣೆಗಾಗಿ ಪಟ್ಟಣ ಪಂಚಾಯತ್‌ಗೆ ಸಂಬಂಧಿಸಿದಂತೆ ತಹಶೀಲ್ದಾರ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಅಧಿೂಚನೆಯಲ್ಲಿ ನಿರ್ದೇಶನ ನೀಡಲಾಗಿದೆ.

ಇದರಂತೆ ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರ್ ಇವರನ್ನು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬೈಂದೂರು ಪಟ್ಟಣ ಪಂಚಾಯತ್‌ನ ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News