ರಾಜ್ಯ ರಾಜಧಾನಿಯಲ್ಲಿ 3,547 ಮಂದಿಗೆ ಕೊರೋನ ಸೋಂಕು ದೃಢ: 23 ಮಂದಿ ಮೃತ್ಯು

Update: 2020-09-23 17:05 GMT

ಬೆಂಗಳೂರು, ಸೆ.21: ನಗರದಲ್ಲಿ ಬುಧವಾರ ಒಂದೆ ದಿನ 3,547 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 3,536 ಸೋಂಕಿತರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದು, 23 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 2,04,275 ಜನರಿಗೆ ಸೋಂಕು ದೃಢಪಟ್ಟಿದ್ದು, ನಗರದಲ್ಲಿ 2,738 ಜನರು ಸೋಂಕಿಗೆ ಬಲಿಯಾಗಿದ್ದು, 1,61,565 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 39,971 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,53,697 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಮಂಗಳವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ಸಿಟಿಯಲ್ಲಿ ಒಟ್ಟು ಸಕ್ರಿಯ 21,558 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 33,140 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ. ನಗರದ 5,57,028 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 6,82,645 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 14,54,967 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.80ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.35ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.78.73ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News