ರೈತ ಸಂಘಟನೆಗಳ ಹೋರಾಟಕ್ಕೆ ಜನವಾದಿ ಮಹಿಳಾ ಸಂಘಟನೆಯ ಬೆಂಬಲ

Update: 2020-09-23 17:33 GMT

ಬೆಂಗಳೂರು, ಸೆ.23: ಕೋವಿಡ್-19ರ ಸಾಂಕ್ರಮಿಕ ರೋಗದ ಸಂಕಷ್ಟದಲ್ಲಿ ಜನರು ಜೀವನ ನಿರ್ವಹಿಸಲಾರದೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವಾಗ ಅವರ ಸಮಸ್ಯೆಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರ ಹಿಂಬಾಗಿಲಿನಿಂದ ಅಗತ್ಯ ವಸ್ತುಗಳ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗು ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಮಸೂದೆಯನ್ನು ಜಾರಿ ಮಾಡಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಆರೋಪಿಸಿದೆ.

ಇದು ರೈತ ಹಾಗು ಜನವಿರೋದಿ ಮಸೂದೆಗಳಾಗಿವೆ. ಇದ್ದರಿಂದ ಪಡಿತರ ವ್ಯವಸ್ಥೆ ಸರ್ವನಾಶವಾಗುತ್ತದೆ, ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗುತ್ತದೆ,  ಅಲ್ಲದೆ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗದೆ, ಆರು ಕಾಸು ಮೂರು ಕಾಸಿಗೆ ಕಾರ್ಪೋರೇಟ್ ಕಂಪನಿಗಳಿಗೆ ತಮ್ಮ ಭೂಮಿಯನ್ನು ಮಾರಾಟ ಮಾಡಿಕೊಂಡು ಈ ದೇಶದ ಬೆನ್ನೆಲುಬಾಗಿರುವ ರೈತರನ್ನು ಬೀದಿಗೆ ತಂದು ನಿಲ್ಲಿಸುವ ಮಸೂದೆಗಳಾಗಿವೆ ಎಂದು ಸಂಘಟನೆಯ ಅಧ್ಯಕ್ಷೆ ದೇವಿ ಹಾಗೂ ಪ್ರಧಾನ ಕಾರ್ಯದರ್ಶಿ ಗೌರಮ್ಮ ಆರೋಪಿಸಿದ್ದಾರೆ.

ರೈತ ಹಾಗು ಮಹಿಳಾ ವಿರೋಧಿ ಈ ಮಸೂದೆಗಳನ್ನು ತೀವ್ರವಾಗಿ ಖಂಡಿಸುತ್ತಾ, ಮಸೂದೆಗಳನ್ನು ಕೇಂದ್ರ ಸರಕಾರ ಕೂಡಲೇ ಹಿಂಪಡೆಯಬೇಕೆಂದು ಸೆ.25ರಂದು ನಡೆಯುವ ರೈತರ ಐಕ್ಯ ಹೋರಾಟವನ್ನು ರಾಜ್ಯವ್ಯಾಪಿಯಾಗಿ ಬೆಂಬಲಿಸಿ ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಹೋರಾಟದಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಭಾಗವಹಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News