ಪಿಜಿಸಿಇಟಿ-2020 ಆನ್‍ಲೈನ್ ಅರ್ಜಿ ತಿದ್ದುಪಡಿಗೆ ಅವಕಾಶ

Update: 2020-09-23 17:33 GMT

ಬೆಂಗಳೂರು, ಸೆ.23: 2020ನೆ ಸಾಲಿನ ಎಂಬಿಎ, ಎಂಸಿಎ, ಎಂಇ, ಎಂಟೆಕ್, ಎಂ.ಆರ್ಕ್ ಕೋರ್ಸುಗಳ ಪ್ರವೇಶಾತಿಗೆ ಪಿಜಿಸಿಇಟಿ-2020 ಸಂಬಂಧ, ಅರ್ಜಿಗಳಲ್ಲಿನ ಮಾಹಿತಿಯನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ಸೆ.24ರಂದು ಬೆಳಗ್ಗೆ 11 ರಿಂದ ಸೆ.25ರ ಸಂಜೆ 6 ರವರೆಗೆ ಅವಕಾಶ ಕಲ್ಪಿಸಲಾಗುವುದು. ಅಭ್ಯರ್ಥಿಗಳು ತಾವು ಆನ್‍ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಅರ್ಹತೆಗೆ ಅನುಗುಣವಾಗಿ ಅಗತ್ಯವಿದ್ದಲ್ಲಿ ಮಾರ್ಪಡಿಸಿಕೊಳ್ಳಬಹುದಾಗಿದೆ.

ಡಿಸಿಇಟಿ-2020: 2020ನೆ ಸಾಲಿನ ಎರಡನೆ ವರ್ಷದ/ಮೂರನೆ ಸೆಮಿಸ್ಟರ್ ಲ್ಯಾಟರಲ್ ಇಂಜಿನಿಯರಿಂಗ್ ಪ್ರವೇಶಾತಿಗೆ ಡಿಸಿಇಟಿ-200 ಸಂಬಂಧ, ಅರ್ಜಿಗಳಲ್ಲಿನ ಮಾಹಿತಿಯನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ಸೆ.24ರಂದು ಬೆಳಗ್ಗೆ 11 ರಿಂದ ಸೆ.25ರ ಸಂಜೆ 6ರವರೆಗೆ ಅವಕಾಶ ಕಲ್ಪಿಸಲಾಗುವುದು. ಅಭ್ಯರ್ಥಿಗಳು ತಾವು ಆನ್‍ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಅರ್ಹತೆಗೆ ಅನುಗುಣವಾಗಿ ಅಗತ್ಯವಿದ್ದಲ್ಲಿ ಮಾರ್ಪಡಿಸಿಕೊಳ್ಳಬಹುದಾಗಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News