ನಮ್ಮ ಶಾಸಕರ 1600 ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ನೀಡಿಲ್ಲ: ಸರಕಾರದ ವಿರುದ್ಧ ಡಿಕೆಶಿ ಕಿಡಿ

Update: 2020-09-24 14:41 GMT

ಬೆಂಗಳೂರು, ಸೆ. 24: `ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಒಂದು ವರ್ಷದ ಅವಧಿಯಲ್ಲಿ ಇಷ್ಟು ದುರಾಡಳಿತ ಮಾಡಿ ಕೆಟ್ಟ ಹೆಸರನ್ನು ಯಾವ ಸರಕಾರಗಳು ಪಡೆದಿರಲಿಲ್ಲ' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದಿಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ವಿಧಾನಸಭೆಯ ಮೊಗಸಾಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರಕಾರ ಪ್ರತಿ ಹಂತದಲ್ಲೂ ವಿಫಲವಾಗಿದೆ. ಈ ಬಗ್ಗೆ ಚರ್ಚೆ ಮಾಡಲು ಅಧಿವೇಶನದಲ್ಲಿ ಅವಕಾಶ ನೀಡಲಿಲ್ಲ. ನಮ್ಮ ಶಾಸಕರು 1600 ಪ್ರಶ್ನೆ ಸಲ್ಲಿಸಿದರೆ ಒಂದಕ್ಕೂ ಉತ್ತರ ನೀಡಿಲ್ಲ. ಭ್ರಷ್ಟಾಚಾರದಲ್ಲಿ ಸಾಕ್ಷಿ ಸಮೇತ ತೋರಿಸಿದರೂ ಅದರ ಬಗ್ಗೆ ಮೌನ ವಹಿಸಿದೆ. ಈ ಸರಕಾರ ಎಲ್ಲ ರಂಗದಲ್ಲೂ ವಿಫಲವಾಗಿದ್ದು, ಅಧಿಕಾರದಲ್ಲಿ ಮುಂದುವರಿಯಲು ಅರ್ಹತೆ ಕಳೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

`ಸರಕಾರ ಇಂದು ರೈತರ ಭೂಮಿ, ಅವರ ಬೆಳೆಯನ್ನು ಮಾತ್ರವಲ್ಲ ಇಡೀ ರೈತ ಸಮುದಾಯವನ್ನೇ ಮಾರಾಟ ಮಾಡಲು ಮುಂದಾಗಿದೆ. ಬಹುರಾಷ್ಟ್ರೀಯ ಕಂಪೆನಿಗಳಿಗೆ ಅನುಕೂಲ ಮಾಡಿಕೊಡಲು ರೈತರು ಮತ್ತು ಕಾರ್ಮಿಕರ ಪರವಾಗಿದ್ದ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಇಂದು ರೈತರನ್ನು ಕೂಲಿ ಕೆಲಸಕ್ಕೆ ಇಳಿಸುತ್ತಿದ್ದಾರೆ' ಎಂದು ಶಿವಕುಮಾರ್ ಟೀಕಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News