ಯಲ್ಲಾಪುರ : ಲಾರಿ-ಕಾರು ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಮೃತ್ಯು
Update: 2020-09-24 20:39 IST
ಯಲ್ಲಾಪುರ : ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಇಂದು ಸಂಜೆಯ ಸುಮಾರಿಗೆ ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ದೆಹಲಿ ನೋಂದಣಿ ಇರುವ ಕಾರು ಹಾಗೂ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ಮಧ್ಯೆ ಅಪಘಾತ ನಡೆದಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಈ ಬಗ್ಗೆ ಕಿರವತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.