×
Ad

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಶಾಸಕ ರಘುಪತಿ ಭಟ್‌ರಿಂದ ಸಚಿವರಿಗೆ ಮನವಿ

Update: 2020-09-24 20:51 IST

ಉಡುಪಿ, ಸೆ.24: ಜಿಲ್ಲೆಯ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನ ಗೊಳಿಸುವ ಕುರಿತಂತೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಗುರುವಾರ ಬೆಂಗಳೂರಿನಲ್ಲಿ ರಾಜ್ಯ ಕಾರ್ಮಿಕ ಹಾಗೂ ಸಕ್ಕರೆ ಸಚಿವರಾದ ಶಿವರಾಮ್ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿ ಚರ್ಚಿಸಿದರು.

ರೈತರ ಬೇಡಿಕೆಯಂತೆ ಸಕ್ಕರೆ ಕಾರ್ಖಾನೆಯನ್ನು ಗ್ಲೋಬಲ್ ಟೆಂಡರ್ ಮೂಲಕ ಖಾಸಗಿಯವರಿಗೆ ವಹಿಸಿ, ಸಕ್ಕರೆ ಕಾರ್ಖಾನೆಯನ್ನು ಆರಂಭಿಸುವ ಬಗ್ಗೆ ಸಚಿವರಿಗೆ ಹಾಗೂ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

ಶಾಸಕರ ಬೇಡಿಕೆಯಂತೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನ ಗೊಳಿಸಲು ತಕ್ಷಣದಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News