ಐಎಎಸ್ ಪರೀಕ್ಷೆ-2021 : ಬ್ರಾಹ್ಮಣ ಅಭ್ಯರ್ಥಿಗಳಿಗೆ ಉಚಿತ ತರಬೇತಿ

Update: 2020-09-24 15:25 GMT

ಉಡುಪಿ, ಸೆ.24: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ, ಯುಪಿಎಸ್ಸಿ ನಡೆಸುವ 2021ನೇ ಸಾಲಿನ ನಾಗರೀಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಇಚ್ಚಿಸುವ ರಾಜ್ಯದ ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳಿಗೆ ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಚಿತ ಆನ್‌ಲೈನ್ ತರಬೇತಿಯನ್ನು ನೀಡಲು ಮಂಡಳಿ ನಿರ್ಧರಿಸಿದೆ.

ಈ ಉಚಿತ ಆನ್‌ಲೈನ್ ತರಬೇತಿಯನ್ನು ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನಮೂದಿಸಿರುವ ಮಂಡಳಿಯ ವೆಬ್‌ಸೈಟ್ coach4ias.ksbdb@karnataka.gov.in  ಮೂಲಕ ಇಂದಿನಿಂದ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ. ರಾಜ್ಯದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿ ಗಳು ಇದರ ಸದುಪಯೋ ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News