×
Ad

ಕೆ.ಎಲ್.ರಾಹುಲ್ ಭರ್ಜರಿ ಶತಕ: ಬೆಂಗಳೂರಿಗೆ 207 ರನ್ ಗಳ ಗುರಿ ನೀಡಿದ ಕಿಂಗ್ಸ್ ಇಲೆವೆನ್ ಪಂಜಾಬ್

Update: 2020-09-24 21:28 IST
photo: twitter

ಅಬುಧಾಬಿ, ಸೆ.24: ನಾಯಕ ಹಾಗೂ ಆರಂಭಿಕ ಬ್ಯಾಟ್ಸ್ ಮನ್ ಕೆ.ಎಲ್ ರಾಹುಲ್ ಭರ್ಜರಿ ಶತಕದ ಸಹಾಯದಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬೃಹತ್ ಮೊತ್ತ ದಾಖಲಿಸಿದ್ದು, ಗೆಲುವಿಗೆ 207 ರನ್ ಗಳ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು. ಕೆ.ಎಲ್ ರಾಹುಲ್ 69 ಎಸೆತಗಳಲ್ಲಿ 132 ರನ್ ಗಳಿಸಿ ಮಿಂಚಿದರು. 18ನೇ ಓವರ್ ನಲ್ಲಿ ಡೇಲ್ ಸ್ಟೇಯ್ನ್ ಎಸೆತದಲ್ಲಿ ಬೌಂಡರಿ ಗಳಿಸಿದ ರಾಹುಲ್ 62 ಎಸೆತಗಳಲ್ಲಿ ಶತಕ ಪೂರೈಸಿದರು. ಒಟ್ಟಾರೆ 14 ಬೌಂಡರಿ ಹಾಗೂ 7 ಸಿಕ್ಸರ್ ಸಿಡಿಸಿದರು. ರಾಹುಲ್ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ಶತಕ ದಾಖಲಿಸಿದರು. 13ನೇ ಆವೃತ್ತಿಯ ಐಪಿಎಲ್ ನಲ್ಲಿ ಶತಕ ದಾಖಲಿಸಿದ ಮೊದಲಿಗ ಎನಿಸಿಕೊಂಡರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಶಿವಮ್ ದುಬೆ ಎರಡು ವಿಕೆಟ್ ಗಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News